
ಬಳ್ಳಾರಿ: ಜಿಲ್ಲೆಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರ ಹೆಸರನ್ನು ಘೋಷಿಸಲಾಗಿದೆ ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ್ ಜೋಶಿ ಹೇಳಿದ್ದಾರೆ.
ಇಂದು ಜಿಲ್ಲೆಯ ಖಾಸಗಿ ಹೋಟೆಲ್ನಲ್ಲಿ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸರ್ವಾನುಮತದಿಂದ ಬಾನು ಮುಷ್ತಾಕ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ’ ಎಂದು ಸ್ಪಷ್ಟಪಡಿಸಿದರು.














