Sunday, March 8, 2026
ಸುದ್ದಿಸುಬ್ರಹ್ಮಣ್ಯ

ಕುಟುಂಬ ಸಮೇತ ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಆಶ್ಲೇಷ ಬಲಿ ನೆರವೇರಿಸಿದ ತಮಿಳುನಾಡಿನ ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ-ಕಹಳೆ ನ್ಯೂಸ್

ಮಂಗಳೂರು:ತಮಿಳುನಾಡಿನ ಬಿಜೆಪಿ ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್‌ ಅಧಿಕಾರಿ ಕೆ. ಅಣ್ಣಾಮಲೈ ಅವರು ಕುಟುಂಬ ಸಮೇತ ಪವಿತ್ರ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದರ್ಶನಕ್ಕೆ ಇಂದು ಆಗಮಿಸಿದ್ರು. ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ ನಂತರ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅಣ್ಣಾಮಲೈ, “ನಾನು ಕಳೆದ ಹತ್ತು ಹದಿನೈದು ವರ್ಷಗಳಿಂದ ಸ್ವಾಮೀಜಿಗಳ ಹತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬರುತ್ತಾ ಇದ್ದೇನೆ. ಆಶ್ಲೇಷ ನಕ್ಷತ್ರದ ಈ ಪುಣ್ಯದಿನದಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದು ತಮಿಳುನಾಡಿನ ಜನ, ಕರ್ನಾಟಕದ ಜನ ಹಾಗೂ ಇಡೀ ಭಾರತದ ಜನರು ಸುಖ ಶಾಂತಿ ನೆಮ್ಮದಿಯಾಗಿ ಇರಬೇಕು ಹಾಗೂ ಎಲ್ಲಾ ಜನರಿಗೂ ಒಳ್ಳೆದಾಗಬೇಕು ಎಂದು ಪ್ರಾರ್ಥನೆ ಮಾಡಿದ್ದೇನೆ” ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು