
ಮಂಗಳೂರು: ಮಂಗಳೂರು ಸಹಿತ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ರವಿವಾರದಂದು ಬಾಂಬ್ ಸ್ಫೋಟದ ಬೆದರಿಕೆಯ ಇ-ಮೇಲ್ ಬಂದಿದ್ದು ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.
ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಇ-ಮೇಲ್ ಬಂದಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿಯೂ ವಿಶೇಷ ತಪಾಸಣೆ ನಡೆಸಲಾಗಿದೆ. ಬೆದರಿಕೆ ಕುರಿತು ಬಜಪೆ ಪೊಲೀಸ್ ಠಾಣೆಗೆ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ದೂರು ನೀಡಿದ್ದಾರೆ.














