Saturday, September 12, 2026
ಸುದ್ದಿ

ಬಂಟ್ವಾಳದಲ್ಲಿ ವೈಯಕ್ತಿಕ ಕಾರಣಕ್ಕಾಗಿ ದಂಪತಿಗಳಿಬ್ಬರು ನೇಣಿಗೆ ಶರಣು – ಕಹಳೆ ನ್ಯೂಸ್

ಬಂಟ್ವಾಳ: ದಂಪತಿಗಳಿಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಪತ್ತನಾಡಿ ಎಂಬಲ್ಲಿ ನಡೆದಿದೆ.

ಜಾಹೀರಾತು

ಗಂಡ ಪ್ರೇಮನಾಥ ಪೂಜಾರಿ ಅವರು ಬಾವಿಯ ನೀರು ಸೇದುವ ಮರದ ಕಂಬಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡರೆ, ಇವರ ಪತ್ನಿ ಚಂದ್ರಾವತಿ ಮನೆಯ ಮಾಡಿನ ಪಕ್ಕಾಸಿಗೆ ಹಗ್ಗ ಹಾಕಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಗೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ದಂಪತಿಗಳು ಮೂರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದು, ಸ್ಥಳಕ್ಕೆ ಗ್ರಾಮಾಂತರ ಎಸ್.ಐ.ಪ್ರಸನ್ನ, ಹಾಗೂ ಸಿಬ್ಬಂದಿಗಳಾದ ಸುರೇಶ್, ಜಯರಾಮ, ಜನಾರ್ದನ ಮನೋಜ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.