Saturday, March 7, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಾಧಕ ಹಿರಿಯ ವಿದ್ಯಾರ್ಥಿನಿಗೆ ಸನ್ಮಾನ -ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರಮಟ್ಟದ ಪರೀಕ್ಷೆಯಾದ Joint Admission Test For Masters(JAM) ನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ವೈಭವಿ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ 147ನೇ ರಾಂಕ್ ಹಾಗೂ ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತಮ ಸಾಧನೆ ಮಾಡಿರುತ್ತಾರೆ.

ಈ ಮೂಲಕ ಬೆಂಗಳೂರಿನಲ್ಲಿರುವ ಭಾರತದ ಶ್ರೇಷ್ಠ ಸಂಶೋಧನಾ ಹಾಗೂ ಉನ್ನತ ಶಿಕ್ಷಣ ಸಂಸ್ಥೆಯಾದ ಐಐಎಸ್ಸಿ ಯಲ್ಲಿ ಎಂ.ಎಸ್ಸಿ, ಪಿ.ಎಚ್.ಡಿ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ವತಿಯಿಂದ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದು ವಿದ್ಯಾರ್ಥಿನಿಗೆ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು