Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಮಾಹಿತಿ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ವಿದ್ಯಾರ್ಥಿಗಳಿಗೆ “ಪಿಯುಸಿ ಪರೀಕ್ಷಾ ಒಳನೋಟ” ಶೀರ್ಷಿಕೆಯಡಿ ಮೊದಲ ಉಪನ್ಯಾಸ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ ಶೆಟ್ಟಿಗಾರ್‌, ದೇವಿಪ್ರಸಾದ್‌ಹಾಗೂ ಉಷಾ ಎ ಎಂ ಇವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಬದಲಾದ ಪ್ರಶ್ನೆಪತ್ರಿಕೆಯ ಮಾದರಿ ಹಾಗೂ ಪರೀಕ್ಷೆಯ ತಯಾರಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪ್ರಥಮ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು