ಬಲ್ನಾಡು 26ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಬಲ್ನಾಡು 26ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆಯು ಇಂದು ಶ್ರೀ ಉಳ್ಳಾಲ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ 26ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಸೀತಾರಾಮ ಗೌಡ ಕಾಂತಿಲ, ಅಧ್ಯಕ್ಷರಾಗಿ ಚರಣ್ ಕುಲಾಲ್ ವಿನಾಯಕ ನಗರ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಕುಲಾಲ್, ಕಾರ್ಯದರ್ಶಿಯಾಗಿ ರುಕ್ಮಯ ಕುಲಾಲ್ , ಜೊತೆ ಕಾರ್ಯದರ್ಶಿ ಯಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ , ಕೋಶಾಧಿಕಾರಿಯಾಗಿ ಅಶೋಕ್ ಕುಮಾರ್ ಪದವು ಅವರನ್ನು ಆಯ್ಕೆ ಮಾಡಲಾಯಿತು.













