ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನೆ-ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಸಾಮಾಜಿಕ ಜಾಲತಾಣಗಳ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಮುಖ್ಯ ಅತಿಥಿಗಳಾದ ಶ್ರೀಮತಿ ಭವ್ಯ ಪಿ ಆರ್ ನಿಡ್ಪಳ್ಳಿ ವಿಭಾಗ ಮುಖ್ಯಸ್ಥರು ಪತ್ರಿಕೋದ್ಯಮ ವಿಭಾಗ ವಿವೇಕಾನಂದ ಮಹಾವಿದ್ಯಾಲಯ ಪುತ್ತೂರು ಇವರು ಮಾತನಾಡಿ ಸಾಮಾಜಿಕ
ಜಾಲತಾಣಗಳ ಬಳಕೆಗಳು ಯಾವಾಗಲೂ ಧನಾತ್ಮಕ ರೀತಿಯಲ್ಲಿ ಇರಬೇಕು .ವಿದ್ಯಾರ್ಥಿ ಜೀವನದಲ್ಲಿ ವಿದ್ಯಾಭ್ಯಾಸಕ್ಕೆ ಉಪಯೋಗವಾಗಿರುವ ವಿಷಯಗಳನ್ನು ಮಾತ್ರ ಸಾಮಾಜಿಕ ಜಾಲತಾಣಗಳಿಂದ ಆಯ್ಕೆ ಮಾಡಿಕೊಳ್ಳಿ ಎಂದರು.
ವೇದಿಕೆಯಲ್ಲಿ ಅತಿಥಿಗಳಾದ ಶ್ರೀ ರಾಕೇಶ್ ನಾಯಕ್ ಪತ್ರಿಕಾವರದಿಗಾರರು ಹಾಗೂ ಶ್ರೀಮತಿ ರಮ್ಯಾ ಬೋಳಂತೂರು ವಿಷಯ ಬರಹಗಾರರು , ಶ್ರೀರಾಮ ವಿದ್ಯಾ
ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾದ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಶೆಟ್ಟಿ, ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಉಪ ಪ್ರಾಂಶುಪಾಲರಾದ ಶ್ರೀ ದಿನೇಶ್
ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ ಜಯಲಕ್ಷ್ಮಿ ಕಾರ್ಯಕ್ರಮವನ್ನು ನಿರ್ವಹಿಸಿದರು.














