Sunday, April 26, 2026
ಸುದ್ದಿ

ರಾಜ್ಯದ ಜನರ ಹಿತಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ `ಚಂಡಿ ಹೋಮ’ದಲ್ಲಿ ಪಾಲ್ಗೊಂಡ ಗೃಹ ಸಚಿವ ಜಿ.ಪರಮೇಶ್ವರ್.! -ಕಹಳೆ ನ್ಯೂಸ್

ಕ್ಷಿಣ ಕನ್ನಡ : ಗೃಹಸಚಿವ ಜಿ. ಪರಮೇಶ್ವರ್  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತಮ್ಮ ಪತ್ನಿ ಜೊತೆಗೆ ವಿಶೇಷ ಪೂಜೆ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ.

ಹೌದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಡಿ ಹೋಮ ಹಾಗೂ ಆಶ್ಲೀಲಾ ಬಲಿ ಪೂಜೆಯಲ್ಲಿ ಪರಮೇಶ್ವರ್ ದಂಪತಿಗಳು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್, ರಾಜ್ಯದ ಜನರ ಹಿತಕ್ಕಾಗಿ ಪ್ರಾರ್ಥಿಸಿ ಪೂಜೆಯಲ್ಲಿ ಪಾಲ್ಗೊಂಡಿರುವುದಾಗಿ ಹೇಳಿದರು. ಪೊಲೀಸ್ ಇಲಾಖೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಶೀಘ್ರವೇ 10-15 ಸಾವಿರ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿ ನಡೆಯಲಿದೆ. ಶೀಘ್ರವೇ 402 ಪಿಎಸ್ ಐ ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತದೆ. ಮಂಗಳೂರಿನ ಎಸ್ ಪಿ ಕಚೇರಿ ಪುತ್ತೂರಿಗೆ ವರ್ಗಾಯಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.