ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಕಲ್ಲಡ್ಕ : ಜು. 10 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ನಿಮಿತ್ತ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು.
ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸುತ್ತಾ,ಶ್ರೀರಾಮ ವಿದ್ಯಾಕೇಂದ್ರ ದೇಶ ಕಟ್ಟುವ ಕಾಯಕವನ್ನು ಮಾಡುತ್ತಿದೆ,ಹಾಗಾಗಿ ಇಲ್ಲಿನ ಎಲ್ಲ ವಿಧ್ಯಾರ್ಥಿಗಳಿಗೆ ಕಣ್ಣಿನ ಸಮಸ್ಯೆಗೆ ಉಚಿತ ಪರಿಹಾರವನ್ನು ನೀಡುವುದಾಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು,ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರು,ವಿವೇಕಾನAದ ವಿದ್ಯಾವರ್ಧಕ ಸಂಘದ ಅಧ್ಯಕ್ಷರೂ ಆದ ಡಾ.ಪ್ರಭಾಕರ ಭಟ್ ಕಲ್ಲಡ್ಕ ವಹಿಸಿದ್ದರು.ವೇದಿಕೆಯಲ್ಲಿ ಅತಿಥಿಗಳಾದ ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್,ನಿರ್ದೇಶಕಿ ಪ್ರಸಾದ್ ನೇತ್ರಾಲಯ , ಡಾ.ಗೌರಿ ಶ್ಯಾಮ ಸುದರ್ಶನ್,ಃಓಙS ವೈದ್ಯರು ಪುತ್ತೂರು, ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ಶ್ರೀ ವಸಂತ ಮಾಧವ ,ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ಶ್ರೀ ಕೃಷ್ಣ ಪ್ರಸಾದ್ ಕಾಯರ್‌ಕಟ್ಟೆ , ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ವಸಂತ ಬಲ್ಲಾಳ್,ಉಪ ಪ್ರಾಂಶುಪಾಲರಾದ ಶ್ರೀ ದಿನೇಶ್ ಉಪಸ್ಥಿತರಿದ್ದರು.
ಉಪನ್ಯಾಸಕಿ ಕುಮಾರಿ ಶ್ವೇತಾ ಕಾರ್ಯಕ್ರಮವನ್ನು ನಿರ್ವಹಿಸಿದರು.














