Thursday, March 12, 2026
ಸುದ್ದಿ

‘ಅಮೃತಧಾರೆ’ ಧಾರಾವಾಹಿ ನಟಿಗೆ ಚಾಕುವಿನಿಂದ ಇರಿದ ಪತಿ : ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತ್ನಿ ಶ್ರುತಿ : ತಡವಾಗಿ ಬೆಳಕಿಗೆ ಬಂದ ಪ್ರಕರಣ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ ಚಾ*ಕು ಇ*ರಿತಕ್ಕೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರುತಿ ಅವರ ಪತಿ ಅಮರೇಶ್ ಅವರೇ ಪತ್ನಿಗೆ ಚಾ*ಕು ಇ*ರಿದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಅಮರೇಶ್ ಅನ್ನು ಬಂಧಿಸಿದ್ದಾರೆ. ಈ ಘಟನೆ ಜುಲೈ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶ್ರುತಿ 20 ವರ್ಷದ ಹಿಂದೆ ಅಮರೇಶ್‌ ಎಚ್‌ಎಸ್‌ಎಂಬಾತನ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳು ಕೂಡ ಇದ್ದರು. ಸಂಸಾರ ಸಮೇತ ಹನುಮಂತ ನಗರದಲ್ಲಿ ಲೀಸ್ ಗೆ ಮನೆ ಪಡೆದು ದಂಪತಿ ವಾಸವಿದ್ದರು. ನಂತರ ಶ್ರುತಿ ನಡವಳಿಕೆ ಗಂಡ ಅಮರೇಶ್‌ಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೂಡ ಸರಿಯಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗಂಡನಿಂದ ದೂರಾಗಿ ಶ್ರುತಿ ಅಣ್ಣನ ಮನೆಯಲ್ಲಿ ವಾಸವಿದ್ದರು. ಕಳೆದ ಏಪ್ರಿಲ್‌ನಲ್ಲಿ ಶ್ರುತಿ ಗಂಡನಿಂದ ದೂರವಾಗಿದ್ದರು. ಇಬ್ಬರ ನಡುವೆ ಲೀಸ್ ಹಣಕ್ಕಾಗಿ ಸಹ ಜಗಳ ನಡೆದಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು

ಈ ಕುರಿತಂತೆ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಇದಾದ ಬಳಿಕ ಕಳೆದ ರಾಜಿ ಸಂದಾನ ಮಾಡಿ ಗಂಡ-ಹೆಂಡತಿ ಒಂದಾಗಿದ್ದರು. ಆದರೆ, ಇಬ್ಬರೂ ಒಂದಾದ ಮಾರನೇ ದಿನವೇ ಗಂಡ ಪತ್ನಿಗೆ ಚಾ*ಕು ಇರಿದಿದ್ದಾನೆ. ಕಳೆದ ಶುಕ್ರವಾರ ಮಕ್ಕಳಿಬ್ಬರು ಕಾಲೇಜಿಗೆ ಹೋದ ನಂತರ ಹೆಂಡತಿಯ ಮೇಲೆ ಹ*ಲ್ಲೆ ನಡೆದಿದೆ. ಪೆಪ್ಪರ್ ಸ್ಪ್ರೇ ಹೊಡೆದು ಹೆಂಡತಿಗೆ ಚಾ*ಕು ಇ*ರಿದು ಕೊ*ಲೆಗೆ ಯತ್ನ ನಡೆಸಿದ್ದಾನೆ. ಸದ್ಯ ಶ್ರುತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.