ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಮಾಣಿ ವಲಯದ ಎಮಾಜೆ ಶಾಲೆಯಲ್ಲಿ ಪರಿಸರ ದಿನಾಚರಣೆ-ಕಹಳೆ ನ್ಯೂಸ್

ಮಾಣಿ ವಲಯದ ನೆಟ್ಲಮುಡ್ನೂರು ಗ್ರಾಮದ ಏಮಾಜೆ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಮಾಹಿತಿ ಹಾಗೂ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಮೇಲ್ವಿಚಾರಕಿ ಆಶಾ ಪಾರ್ವತಿ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಶ್ರೀಕ್ಷೇತ್ರದ ವತಿಯಿಂದ ನಡೆಸುವ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು ಕಾರ್ಯಕ್ರದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಹರೀಶ್ ರವರು .ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ.ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಪೋಷಿಸುವ ಜವಾಬ್ದಾರಿ ಎಲ್ಲರಿಗೂ ಇದೆ ಎಂದರು.ಮಾಣಿ ಶೌರ್ಯ ಘಟಕದ ಪ್ರತಿನಿಧಿ ಸತೀಶ್,ಮಕ್ಕಳ ಪೋಷಕರು ಸಹಶಿಕ್ಷಕರು ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕಿ ತ್ರಿವೇಣಿಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಶಾಲೆಗೆ ಒದಗಿಸಿದ ಪೀಠೋಪಕರಣ, ಕಟ್ಟಡಕ್ಕೆ ಅನುದಾನ,ಜ್ಞಾನ ದೀಪ ಶಿಕ್ಷಕರ ಒದಗಣೆ ಕುರಿತು ಶ್ಲಾಘಿಸಿದರು. ಮುಖ್ಯ ಶಿಕ್ಷಕಿ ತ್ರಿವೇಣಿ ಸ್ವಾಗತಿಸಿ, ಸಹ ಶಿಕ್ಷಕಿ ದೀಕ್ಷಾ ವಂದಿಸಿದರು.ಸಹ ಶಿಕ್ಷಕಿ ಅಕ್ಷತಾ ನಿರೂಪಿಸಿದರು. ಸಹ ಶಿಕ್ಷಕಿ ಐಸಮ್ಮ ಸಹಕರಿಸಿದರು.









