Saturday, March 7, 2026
ಉಡುಪಿಕಾರ್ಕಳಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾರ್ಳಕದ ಪರಶುರಾಮನ ಮೂರ್ತಿ ಫೈಬರ್ ಎಂದ ಕಾಂಗ್ರೆಸ್ ನಾಯಕರಿಗೆ ಮುಖಭಂಗ ; ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ, ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಕಾರ್ಕಳ : ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಕನಸಿನ ಯೋಜನೆ ಉಮ್ಮಿಕಲ್ ಬೆಟ್ಟದ ಮೇಲೆನ ಪರಶುರಾಮ ಥೀಮ್ ಪಾರ್ಕ್ ಹಾಗೂ ಅಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ವಿವಾದದ ಕೇಂದ್ರವಾಗಿತ್ತು. ಇದೀಗ ಅದನ್ನು ಕಂಚಿನದ್ದಲ್ಲ ಫೈಬರ್ ನದ್ದು ಎಂದು ಅಪಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಗೆ ಮತ್ತೆ ಬಹುದೊಡ್ಡ ಮುಖಭಂಗವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಲಾಗಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞ ರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿರುತ್ತದೆ ಎಂದು‌‌ ಉಲ್ಲೇಖಿಸಲಾಗಿದೆ.

ಜಾಹೀರಾತು
ಜಾಹೀರಾತು

ನಿರ್ಮಿತಿ ಮತ್ತು ಶಿಲ್ಪಿಯ ನಡುವಿನ ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ. ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದ್ದು ಕಾರ್ಕಳದಲ್ಲಿ ನಿರ್ಮಿಸಿರುವ ಪರಶುರಾಮನ ಪ್ರತಿಮೆ ಪೈಬರ್ ನದ್ದು ಎಂಬ ವಾದ ಸುಳ್ಳಾಗಿದೆ.

ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ಇವರುಗಳು ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ, ಸಾಕ್ಷಿ ನಾಶ ಮಾಡಿರುತ್ತಾರೆ. ಅವರ ವಿರುದ್ದ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಯಂತೆ 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ ಮಾನ್ಯ ಕಾರ್ಕಳದ ನ್ಯಾಯಾಲಯಕ್ಕೆ ನಿವೇದಿಸಲಾಗಿದೆ.

ದಿನಾಂಕ 21.06.2024 ರಂದು ಕೃಷ್ಣ ಶೆಟ್ಟಿ ಇವರು ಫಿರ್ಯಾದಿ ನೀಡಿದ್ದು, ಅದರಲ್ಲಿ ಕೃಷ್ಣ ನಾಯಕ್ Krish Art World ಎಂಬ ಸಂಸ್ಥೆಯ ಮುಖಾಂತರ ಕಾರ್ಕಳ ತಾಲೂಕಿನ ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದುಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಆರೋಪಿ ಕೃಷ್ಣ ನಾಯ್ಕ ಎಂಬವರು ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಯನ್ನು ಮಾಡಿರುತ್ತಾರೆ ಎಂದು ನೀಡಿದ ಫಿರ್ಯಾದಿಯಂತೆ ಕಾರ್ಕಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 120/2024 ಕಲಂ 420.409 ಐಪಿಸಿ ರಂತೆ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗಿತ್ತು.

ಪ್ರಕರಣದ ತನಿಖಾ ಕಾಲದಲ್ಲಿ ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡದೇ, ಹಿತ್ತಾಳೆ ಲೋಹದಿಂದ ಪರಶುರಾಮ ಮೂರ್ತಿಯನ್ನು ನಿರ್ಮಾಣ ಮಾಡಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಒಟ್ಟಿನಲ್ಲಿ ಶಾಸಕ ಸುನೀಲ್ ಕುಮಾರ್ ಸೇರಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಮಾಡುತ್ತಿದ್ದ ಆರೋಪ ಸುಳ್ಳು ಎಂದು ಸಾಬೀತಾಗಿದೆ.