ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼವಿವೇಕ ಪ್ರದೀಪ್ತಿ -2025’ – ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ 19 ರಂದು ʼವಿವೇಕ ಪ್ರದೀಪ್ತಿ-2025ʼ ಶೀರ್ಷಿಕೆಯಡಿ 2024-25 ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರೀಷ್ಮ ವಿವೇಕ್ ಆಳ್ವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಳ್ವಾಸ್ ಫಾರ್ಮಸಿ, ಆಳ್ವಾಸ್
ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಹಾಗೂ ಹಿರಿಯ ವಿದ್ಯಾರ್ಥಿ, ವಿವೇಕಾನಂದ ಪದವಿ ಪೂರ್ವ ಕಾಲೇಜು ಪುತ್ತೂರು ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ .ಪಿ ವಹಿಸಿಕೊಳ್ಳಲಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಹಾಗೂ ಜೆ.ಇ.ಇ, ನೀಟ್, ಸಿ.ಇ.ಟಿ, ಸಿ.ಎ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು,
ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್ ಶೆಣೈ .ಕೆ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಎಂ. ದೇವಿಚರಣ್ ರೈ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ಹಿರಿಯ
ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.














