Recent Posts

Saturday, April 25, 2026
ಉಡುಪಿಸುದ್ದಿ

ಪೊಲೀಸರಿಂದ ದಿಢೀರ್‌ ವಾಹನ ತಪಾಸಣೆ: ಹಲವು ವಾಹನ ವಶಕ್ಕೆ, ಹಲವರಿಗೆ ದಂಡ – ಕಹಳೆ ನ್ಯೂಸ್

ಡುಪಿ: ಉಡುಪಿ ಉಪವಿಭಾಗದ ಪೊಲೀಸರು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಐದು ಸ್ಥಳಗಳಲ್ಲಿ ಶನಿವಾರ (ಜು.19) ರಾತ್ರಿ ನಾಕಾಬಂಧಿ ಹಾಕಿ ವಾಹನಗಳ ದಿಢೀರ್ ತಪಾಸಣೆ ನಡೆಸಿದ್ದು, ಮದ್ಯಪಾನ ಮಾಡಿ ವಾಹನ ಚಲಾವಣೆ ಮಾಡುತ್ತಿದ್ದವರನ್ನು ತಡೆದು ದಂಡ ವಿಧಿಸಿದ್ದಾರೆ.

ಈ ಸಂದರ್ಭದಲ್ಲಿ 18 ಕಾರುಗಳು ಮತ್ತು 3 ಬೈಕ್ ಗಳು ಸೇರಿದಂತೆ 21 ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವವರನ್ನು ಪತ್ತೆ ಮಾಡಿ ಅವರ ವಿರುದ್ದ ವಿರುದ್ಧ ಮೋಟಾರು ವಾಹನ ಅಧಿನಿಯಮ ಪ್ರಕಾರ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮದ್ಯ ಸೇವಿಸಿ ವಾಹನ ಚಲಾವಣೆ ಮಾಡುವ ಪ್ರತಿಯೊಂದು ಪ್ರಕರಣಕ್ಕೆ ನ್ಯಾಯಲಯದಲ್ಲಿ ಕನಿಷ್ಠ10,000 ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಪೊಲೀಸರ ಸೂಚನೆ ಉಲ್ಲಂಘಿಸಿದ, ಮೂರು ಜನ ಸವಾರಿ ಮಾಡಿದ ಪ್ರಕರಣಗಳಲ್ಲಿ 10 ವಾಹನಗಳಿಗೆ 10,000 ರೂ. ಸ್ಥಳ ದಂಡ ವಿಧಿಸಲಾಗಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಪೊಲೀಸ್ ಅಧೀಕ್ಷಕರ ಸೂಚನೆ ಮೇರೆಗೆ ಉಡುಪಿ ಡಿವೈಎಸ್ಪಿ, ಮಣಿಪಾಲ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಉಡುಪಿ ನಗರ, ಉಡುಪಿ ಸಂಚಾರ, ಮಲ್ಪೆ ಹಾಗೂ ಮಣಿಪಾಲ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.