Saturday, April 25, 2026
ಸುದ್ದಿ

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಧಾರಾಕಾರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ, ಯಾವೆಲ್ಲಾ ಜಿಲ್ಲೆಗಳಲ್ಲಿ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 21ರಿಂದ 24ರ ವರೆಗೆ ಕರಾವಳಿಯ ಉಡುಪಿ ದಕ್ಷಿಣ ಕನ್ನಡ, ಉತ್ತರಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಯಾವೆಲ್ಲಾ ಜಿಲ್ಲೆಗಳಲ್ಲಿ ಅಲರ್ಟ್‌ ಘೋಷಣೆ?

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಜುಲೈ 21ರಂದು ಆರೆಂಜ್ ಅಲರ್ಟ್ (Orange Alert) ನೀಡಲಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ಚಾಮರಾಜನಗರ, ಕೋಲಾರ, ಮೈಸೂರು, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ನೀಡಲಾಗಿದೆ.

ಜುಲೈ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಶಿವಮೊಗ್ಗ, ಮೈಸೂರು, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ಕೊಪ್ಪಳ, ಕಲಬುರಗಿ, ರಾಯಚೂರು, ಬೀದರ್, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 23ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ಕೊಡಗು, ಹಾಸನ, ಮೈಸೂರು, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಹವಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.