
ಪಹಲ್ಗಾಂ ದಾಳಿ, ಆಪರೇಷನ್ ಸಿಂದೂರ, ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಬಗ್ಗೆ ಪ್ರಧಾನಿ ಮೋದಿ ಅಧಿವೇಶನದಲ್ಲಿ ಸ್ಪಷ್ಟನೆ ನೀಡಬೇಕೆಂದು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳು ಒತ್ತಾಯಿಸಿವೆ. ಸರ್ಕಾರ ಕೂಡ ಪ್ರತಿಪಕ್ಷಗಳ ಆರೋಪಕ್ಕೆ ತಕ್ಕ ಪ್ರತಿಕ್ರಿಯೆ ನೀಡಲು ಕಾರ್ಯತಂತ್ರ ರೂಪಿಸಿದೆ.
ಅಧಿವೇಶನದಲ್ಲಿ ಪ್ರಧಾನಿ ಮೋದಿ ಅವರಿಂದ ಉತ್ತರಕ್ಕೆ ವಿಪಕ್ಷಗಳು ಪಟ್ಟು ಹಿಡಿಯುವ ಸಾಧ್ಯತೆ ಇದೆ. ಮೋದಿಯವರ ಬದಲಾಗಿ ವಿದೇಶಾಂಗ ಸಚಿವರು, ರಕ್ಷಣಾ ಸಚಿವರು, ಗೃಹ ಸಚಿವರು ವಿಪಕ್ಷಗಳಿಗೆ ಉತ್ತರ ನೀಡುವ ಸಾಧ್ಯತೆ ಇದೆ.









