Thursday, March 12, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲ ಗೌರವ ಸನ್ಮಾನ ಕಾರ್ಯಕ್ರಮ ಇಂದು ನಡೆಯಲಿದೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ ಶೆಟ್ಟಿ ವಿಟ್ಲ ಅವರ ಅಧ್ಯಕ್ಷತೆಯಲ್ಲಿ ಸಂಜೆ 4 ಗಂಟೆಗೆ ಕೆಯ್ಯೂರು ದೇರ್ಲದಲ್ಲಿರುವ ಡಾ. ನರೇಂದ್ರ ರೈ ದೇರ್ಲ ಅವರ ಮನೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ ದಂಬೆಕ್ಕಾನ ಸದಾಶಿವ ರೈ ಸನ್ಮಾನ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜರ್ನಲಿಸ್ಟ್ ಯೂನಿಯನ್ ಸದಸ್ಯರಿಗೆ ಎಸ್‌ಎಲ್‌ವಿ ಬುಕ್‌ಹೌಸ್ ವತಿಯಿಂದ ಲ್ಯಾಪ್‌ಟಾಪ್ ಬ್ಯಾಗ್ ವಿತರಣೆ ನಡೆಯಲಿದೆ. ಜರ್ನಲಿಸ್ಟ್ ಯೂನಿಯನ್ ತಾಲೂಕು ಘಟಕದ ಸ್ಥಾಪಕಾಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊಟ್ಟೆತ್ತಡ್ಕ, ಉಪಾಧ್ಯಕ್ಷರಾದ ಚೈತ್ರ ಬಂಗೇರ, ಸುಮಿತ್ರಾ ಬಿ., ಕಾರ್ಯದರ್ಶಿ ಕವಿತಾ ಮಾಣಿ, ಜತೆ ಕಾರ್ಯದರ್ಶಿ ಚಿನ್ಮಯಕೃಷ್ಣ ಮತ್ತು ಕೋಶಾಧಿಕಾರಿ ಪ್ರಜ್ವಲ್ ಕೋಟ್ಯಾನ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು