ಕೊಂಬೆಟ್ಟುವಿನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ನಲ್ಲಿ ಇಂದಿನಿಂದ ಜು.31ರವರೆಗೆ ಜನರೇಟರ್ ಗಳ ಮಾಹಿತಿ ಹಾಗೂ ಮಾರಾಟ -ಕಹಳೆ ನ್ಯೂಸ್

ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟ್ರಿಕಲ್ಸ್ ನಲ್ಲಿ ಇಂದಿನಿಂದ ಜು.31ರವರೆಗೆ ಜನರೇಟರ್ ಗಳ ಮಾಹಿತಿ ಹಾಗೂ ಮಾರಾಟ ನಡೆಯಲಿದ್ದು ಇದರ ಉದ್ಘಾಟನಾ ಕಾರ್ಯಕ್ರಮವನ್ನು ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ಈ ವೇಳೆ ಹೋಂಡಾ ಸಂಸ್ಥೆಯ ಮಹೇಶ್ ಜೋಶಿ, ಕುಕ್ಕಿಲ ಎಂಟರ್’ಪ್ರೈಸಸ್ ಮಾಲಕರಾದ ವೆಂಕಟರಮಣ ಭಟ್, ಪಶುಪತಿ ಸಂಸ್ಥೆಯ ಪಶುಪತಿ ಶರ್ಮಾ ಉಪಸ್ಥಿತರಿದ್ದರು.
ಮಾಹಿತಿ ಹಾಗೂ ಮಾರಾಟ ಕಾರ್ಯಕ್ರಮದಲ್ಲಿ ಹೋಂಡಾ ಅಮೆರ್ ಎನ್.ಎಸ್.ಎಂ. ಇಂಡಿಯಾ ಮತ್ತು ಜೀನ್’ಎಕ್ಸ್ ಬ್ರಾಂಡ್’ಗಳ ಜನರೇಟರ್’ಗಳು ಲಭ್ಯವಾಗಲಿದೆ.
ನಿರಂತರವಾಗಿ ಕಾಡುತ್ತಿರುವ ವಿದ್ಯುತ್ ಸಮಸ್ಯೆಯನ್ನು ನಿವಾರಿಸುವ ದೃಷ್ಟಿಕೋನದಿಂದ ಎಲ್ಲಾ ಕ್ಷೇತ್ರಗಳಿಗೂ ಅನ್ವಯವಾಗುವಂತಹ ಜನರೇಟರ್’ಗಳನ್ನು ಇಲ್ಲಿ ಕಾಣಲು ಸಾಧ್ಯ. ಪ್ರಮುಖವಾಗಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕರಾವಳಿ ಭಾಗದ ಕೃಷಿ ಚಟುವಟಿಕೆ ಸೊರಗುತ್ತಿರುವ ಕೆಲ ಉದಾಹರಣೆಯೂ ನಮ್ಮ ಮುಂದೆ ಬರುತ್ತದೆ. ಇದಕ್ಕೆ ಪರಿಹಾರದ ರೂಪದಲ್ಲಿ ಜನರೇಟರ್’ಗಳನ್ನು ಅನ್ವೇಷಿಸಿದ್ದು, ಕೃಷಿಕರ ಮುಂದೆ ಬರಲಿದೆ. ಇದಲ್ಲದೇ ಕನ್’ಸ್ಟ್ರಕ್ಷನ್ / ಫ್ಯಾಬ್ರಿಕೇಷನ್ / ಎಲೆಕ್ಟ್ರಿಕಲ್ ವೆಲ್ಡಿಂಗ್ ಕೆಲಸಗಳಿಗಾಗಿ, ಅಂಗಡಿ – ಮಳಿಗೆಗಳಿಗಾಗಿ, ದಿನಬಳಕೆ ಹಾಗೂ ಕೈಗಾರಿಕೆಗಳಿಗಾಗಿ ವಿವಿಧ ವಿನ್ಯಾಸದ ಜನರೇಟರ್’ಗಳು ಲಭ್ಯವಾಗಲಿದೆ.
ಹೋಂಡಾ ಎಂಜಿನ್ ಹೊಂದಿರುವ ಈ ಜನರೇಟರ್’ಗಳು ಅತ್ಯುತ್ತಮ ಗುಣಮಟ್ಟ, ದೀರ್ಘ ಬಾಳಿಕೆ, ಪವರ್ ಬ್ಯಾಕಪ್, 1 ವರ್ಷದ ವ್ಯಾರೆಂಟಿ, ಕಡಿಮೆ ಬೆಲೆ ನಮ್ಮೂರಿನಲ್ಲೇ ಲಭ್ಯವಾಗಲಿದೆ ಎನ್ನುವುದು ಇಲ್ಲಿನ ವಿಶೇಷತೆ.














