Wednesday, March 11, 2026
ಉಡುಪಿಜಿಲ್ಲೆಸುದ್ದಿ

ಸಹಕಾರಿ ಲೆಕ್ಕಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಸಹಿತ ಇಬ್ಬರು ಲೋಕಾಯುಕ್ತ ಬಲೆಗೆ -ಕಹಳೆ ನ್ಯೂಸ್

ಉಡುಪಿ : ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ನಡೆಸಿಕೊಡಲು ಲಂಚದ ಬೇಡಿಕೆ ಇಟ್ಟ ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಅವರನ್ನು ಜು.24ರಂದು ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಮಾಡಿ ಕೊಡಲು ತಲಾ 5000 ರಂತೆ ಒಟ್ಟು 10,000ರೂ ಲಂಚಕ್ಕೆ ಬೇಡಿಕೆ ಆರೋಪಿಗಳು ಇಟ್ಟಿದ್ದರು. ಈ ಸಂಬಂಧ ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ ಈ ಕುರಿತು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು