ಅಕ್ಷಯ ಕಾಲೇಜಿನಲ್ಲಿ ಎಲೈಟ್ ಇಂಟೀರಿಯರ್ ಡಿಸೈನ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ -ಕಹಳೆ ನ್ಯೂಸ್

ಪುತ್ತೂರು : ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಎಲೈಟ್ ಇಂಟೀರಿಯರ್ ಡಿಸೈನ್ ಅಸೋಸಿಯೇಷನ್ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಇಂಟೀರಿಯರ್ ಡಿಸೈನ್ ವಿಭಾಗದ ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಅಕ್ಷಯ ಕಾಲೇಜಿನ ಐಕ್ಯೂಎಸಿ ಇದರ ಸಂಯೋಜಕಿ ಹಾಗೂ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಮತಿ ರಶ್ಮಿ ಕೆ. ಇವರು ಶಿಸ್ತುಬದ್ಧ ಜೀವನ, ಗೌರವ ನೀಡುವುದು, ಪ್ರೀತಿ, ವಿಶಾಲ ಮನೋಭಾವನೆ, ವ್ಯಕ್ತಿತ್ವದಲ್ಲಿ ಸ್ಥಿರತೆ, ಸಂತೋಷದ ಜೀವನ,ನಿರ್ಧಾರದಲ್ಲಿ ಸ್ವಂತಿಕೆ ಈ ಎಲ್ಲಾ ಮೌಲ್ಯಗಳನ್ನು ಯಾವ ರೀತಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಈ ಮೌಲ್ಯಗಳು ಜೀವನದಲ್ಲಿ ಎಷ್ಟು ಮಹತ್ವದ ಪಾತ್ರವನ್ನು ವಹಿಸುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಚಟುವಟಿಕೆಗಳ ಮೂಲಕ ವಿವರಿಸಿದರು.
ಈ ಕಾರ್ಯಾಗಾರದಲ್ಲಿ ಕಾಲೇಜಿನ ಪ್ರಾಂಶುಪಾಲರು ಶ್ರೀ ಸಂಪತ್ ಕೆ. ಪಕ್ಕಳ, ಆಡಳಿತ ಅಧಿಕಾರಿ ಶ್ರೀ ಅರ್ಪಿತ್ ಟಿ. ಎ. , ಇಂಟೀರಿಯರ್ ಡಿಸೈನ್ ವಿಭಾಗದ ಉಪನ್ಯಾಸಕಿಯರಾದ ಶ್ರೀಮತಿ ಕಾವ್ಯ ಹಾಗೂ ಕುಮಾರಿ ಶ್ರದ್ಧಾ, ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಕಿಶನ್ ಎನ್ ರಾವ್ ಉಪಸ್ಥಿತರಿದ್ದರು.
ಇಂಟೀರಿಯರ್ ಡಿಸೈನ್ ವಿಭಾಗದ ಮುಖ್ಯಸ್ಥರಾದ ಶ್ರೀ ರಕ್ಷಣ ಟಿ. ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ನಿರೂಪಣೆ, ಸ್ವಾಗತ, ಪ್ರಾರ್ಥನೆ ಹಾಗೂ ಧನ್ಯವಾದಗಳನ್ನು ನಡೆಸಿಕೊಟ್ಟರು.














