
ಹಾನಿಗೊಂಡ ರಿಕ್ಷಾ ಮಾಧವ ಗಟ್ಟಿ ಎಂಬವರಿಗೆ ಸೇರಿದ್ದಾಗಿದೆ. ಮೂರು ವಿದ್ಯುತ್ ಕಂಬಗಳು ರಸ್ತೆಗೆ ಉರುಳಿದ ಪರಿಣಾಮ ಸೋಮೇಶ್ವರ-ತೊಕ್ಕೊಟ್ಟು ಒಳಪೇಟೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ನಸುಕಿನಲ್ಲಿ ಘಟನೆ ಸಂಭವಿಸಿದ್ದರಿಂದ ಸ್ಥಳದಲ್ಲಿ ಯಾರೂ ಇರಲಿಲ್ಲ. ಘಟನಾ ಸ್ಥಳಕ್ಕೆ ಸೋಮೇಶ್ವರ ಪುರಸಭೆ ಉಪಾಧ್ಯಕ್ಷ ರವಿಶಂಕರ್ ಹಾಗೂ ಸದಸ್ಯರು ಭೇಟಿ ನೀಡಿ ಪರಿಶೀಲಿಸಿದರು.












