
ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ).ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿ ಕಾವು ಇವರ ಸಹಯೋಗದೊಂದಿಗೆ ನವೋದಯ ಒಕ್ಕೂಟ ಕಾವು ಇದರ ವತಿಯಿಂದ ಉಚಿತ ಪುಸ್ತಕ ವಿತರಣೆ ಮತ್ತು ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮವೊಂದು ಕಾವು ಶಿವಸದನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಸಹಕಾರ ಸಂಘದ ಮುಖ್ಯ ನಿರ್ವಾಹಣಾಧಿಕಾರಿಗಳಾದ ಶ್ರೀ ಕೇಶವಮೂರ್ತಿ ಯವರು ಒಕ್ಕೂಟದ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡಾಗ ಮಾತ್ರ ಅದರ ಹಿಂದಿನ ಶ್ರಮ ಸಾರ್ಥಕವಾಗುತ್ತದೆ ಎಂದರು.

ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿದ ಕಾ.ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಶ್ರೀ ಅಚ್ಚುತ್ತ ಮೂಡತ್ತಾಯರವರು ಕಳೆದ ಹಲವಾರು ವರ್ಷಗಳಿಂದ ನವೋದಯ ಒಕ್ಕೂಟದಿಂದ ನಿರಂತರ ಆರ್ಥಿಕ ವ್ಯವಹಾರದೊಂದಿಗೆ ಸಾಮಾಜಿಕ,ಶೈಕ್ಷಣಿಕ, ಆರೋಗ್ಯ ,ಅರಿವು,ಜಾಗೃತಿಯಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು ನಮ್ಮ ಗ್ರಾಮದಲ್ಲಿ ಅತ್ಯಂತ ಉತ್ತಮ ಚಟುವಟಿಕೆಯ ಒಕ್ಕೂಟವಾಗಿದೆ.ಇವರ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಸಂಘದ ಮೂಲಕ ಸಂಪೂರ್ಣ ಪ್ರೋತ್ಸಾಹ ನೀಡುತ್ತಿದ್ದೇವೆ ಎಂದರು.
ವೇದಿಕೆಯಲ್ಲಿ ನವೋದಯ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸುಬ್ರಾಯ ಗೌಡ, ಪ್ರೇರಕರಾದ ಶ್ರೀಮತಿ ಮಾಧವಿ,ಉಪಾಧ್ಯಕ್ಷರಾದ ಶ್ರೀಮತಿ ಸುಮತಿ ಉಪಸ್ಥಿತಿಯಿದ್ದರು.
ನವೋದಯ ಸದಸ್ಯರ 90 ಮಕ್ಕಳಿಗೆ ಉಚಿತ ಪುಸ್ತಕ ಮತ್ತು ಪರಿಕರ ಹಾಗೂ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸದಸ್ಯರ ಮೂವರು ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಈ ಸಂಧರ್ಭದಲ್ಲಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಹರಿಣಾಕ್ಷಿಯವರು ಪ್ರಾರ್ಥನೆಗೈದು,ಒಕ್ಕೂಟದ ಅಧ್ಯಕ್ಷರಾದ ಸುಬ್ರಾಯ ಗೌಡ ಸ್ವಾಗತಿಸಿದರು.ಕಾರ್ಯದರ್ಶಿ ಶ್ರೀಮತಿ ನಿರ್ಮಲಾ ರಾವ್ ವರದಿ ವಾಚಿಸಿದರು.ಪ್ರೇರಕಿ ಶ್ರೀಮತಿ ಮಾಧವಿಯವರು ಧನ್ಯವಾದ ಗೈದ ಈ ಕಾರ್ಯಕ್ರಮವನ್ನು ನಿಕಟಪೂರ್ವ ಅಧ್ಯಕ್ಷರಾದ ಚಿದಾನಂದ ಆಚಾರ್ಯ ನಿರ್ವಹಿಸಿದರು.














