Wednesday, September 9, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬಳಿಯ ಬೊಳಿಯಾರ್‌ನಲ್ಲಿ ಒಂಟಿ ಸಲಗ ಪ್ರತ್ಯಕ್ಷ;ಪಾರಾದ ಶಾಲಾ ಮಕ್ಕಳು-ಕಹಳೆ ನ್ಯೂಸ್

ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಬೊಳಿಯಾರ್‌ ಬಳಿ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲೇ ಒಂಟಿ ಸಲಗ ಪ್ರತ್ಯಕ್ಷವಾಗಿದೆ.

ಜಾಹೀರಾತು

ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳದಲ್ಲಿದ್ದ ಮಕ್ಕಳು ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ.

ಬಳಿಕ ಆನೆ ಕಾಡಿನತ್ತ ತೆರಳಿದೆ. ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ಕಾಡಾನೆ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನು ಕೊಂದಿತ್ತು. ಇದರ ಬೆನ್ನಲ್ಲೇ ಮತ್ತೆ ಒಂಟಿ ಸಲಗ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಮತ್ತಷ್ಟು ಆತಂಕಕ್ಕೆ ಎಡೆಮಾಡಿದೆ.