Saturday, March 7, 2026
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು.

ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ ಹೊರತೆಗೆದಿದ್ದಾಗಿ ಆತ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು, ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌), ಕಂದಾಯ, ಅರಣ್ಯ ಹಾಗೂ ಸರ್ವೇ ಇಲಾಖೆಯ ಅಧಿಕಾರಿಗಳ ಸಮ್ಮುಖoದಲ್ಲಿ ಮಹಜರು ಪ್ರಕ್ರಿಯೆ ಕೈಗೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಧರ್ಮಸ್ಥಳದ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ತಾನೇ ಹಲವು ಶವಗಳನ್ನು ಹೂತಿರುವುದಾಗಿ ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಆತನ ಹೇಳಿಕೆಯನ್ನು ಆಧರಿಸಿ, ತನಿಖಾ ತಂಡವು ಇಂದು ನೇತ್ರಾವತಿ ತೀರದಲ್ಲಿ ಪರಿಶೀಲನೆ ನಡೆಸಿತು. ಈ ವೇಳೆ, ಆತ ನಿರ್ದಿಷ್ಟ ಸ್ಥಳವೊಂದನ್ನು ಗುರುತಿಸಿದ್ದು, ಆ ಪ್ರದೇಶದಲ್ಲಿ ಶವ ಹೂತಿರುವುದಾಗಿ ಮಾಹಿತಿ ನೀಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು

ಸ್ಥಳದಲ್ಲಿ ದಟ್ಟವಾಗಿ ಗಿಡಗಂಟಿಗಳು ಬೆಳೆದಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಅನಾಮಿಕ ಗುರುತಿಸಿದ ಪ್ರದೇಶದ ಸುತ್ತ ಪೊಲೀಸರು ಟೇಪ್ ಕಟ್ಟಿ ನಿರ್ಬಂಧ ಹೇರಿದ್ದು, ಯಾರೂ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ತಜ್ಞರ ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ತನಿಖೆ ಮುಂದುವರಿದಿದೆ.