ಚಿಕ್ಕಮಗಳೂರಲ್ಲಿ ‘KSRTC’ ಬಸ್-ಕ್ಯಾಂಟರ್ ನಡುವೆ ಭೀಕರ ಅಪಘಾತ : ಚಾಲಕ, ಕ್ಲೀನರ್ ಸ್ಥಳದಲ್ಲೆ ದುರ್ಮರಣ!–ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಶಿವಪುರನಲ್ಲಿ ನಿದ್ದೆಯ ಮಂಪರಿನಲ್ಲಿ ಕ್ಯಾಂಟರ್ ಚಾಲಕ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ. ಕ್ಯಾಟರ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಹುಬ್ಬಳ್ಳಿಯಿಂದ ಕ್ಯಾಂಟರ್ ವಾಹನ ಮೈಸೂರಿಗೆ ತಿರುಳುತ್ತಿತ್ತು ಕಡೂರಿನಿಂದ ಕೆಎಸ್‌ಆರ್ಟಿಸಿ ಬಸ್ ಹೂವಿನಹಡಗಲಿಗೆ ತೆರಳುತ್ತಿತ್ತು. ಮೃತಪಟ್ಟ ಇಬ್ಬರನ್ನು ಹುಬ್ಬಳ್ಳಿ ಮೂಲದ ಚಾಲಕ ಕ್ಲೀನರ್ ಎಂದು ತಿಳಿದುಬಂದಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಅಪಘಾತ ಕುರಿತು ಪ್ರಕರಣ ದಾಖಲಾಗಿದೆ.












