ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ -ಕಹಳೆ ನ್ಯೂಸ್

ಪುತ್ತೂರು : ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಪೂಜೆಯು ಆ.8 ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ನಡೆಯಲಿದೆ.
ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಂಗಾಧರ ಅಮೀನ್, ಕಾರ್ಯದರ್ಶಿ ಶ್ರೀ ಜಯಂತ ಶೆಟ್ಟಿ, ಕಂಬಳದಡ್ಡ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಸಿ.ಟೆ.ಸುರೇಶ್, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಭವ್ಯ ರಾಘವೇಣದ್ರ ಶೆಟ್ಟಿ,ಕಾರ್ಯದರ್ಶಿ ಶ್ರೀಮತಿ ನಳಿನಿ ಕೊಲ್ಯ, ಜೊತೆ ಕಾರ್ಯದರ್ಶಿ ಶ್ರೀ ಮತಿ ಪೂರ್ಣಿಮಾ ರೈ ಉಪಸ್ಥಿತರಿದ್ದಾರೆ.













