ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ರಾಮ ವಿದ್ಯಾ ಕೇಂದ್ರ ಕಲ್ಲಡ್ಕ, ಶ್ರೀ ಶಾರದಾ ಭಜನಾ ಮಂದಿರ ವೀರಕಂಭ, ಹಾಗೂ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ವೀರಕಂಭ ವತಿಯಿಂದ 21 ನೇ ವರ್ಷದ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮ ಶ್ರೀ ಶಾರದಾ ಭಜನಾ ಮಂದಿರ ವೀರಕಂಭದಲ್ಲಿ ಜರಗಿತು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು.
ಕಲ್ಲಡ್ಕ ಶ್ರೀರಾಮ ಪ್ರೌಢಶಾಲಾ ಶಿಕ್ಷಕಿ ಸೌಮ್ಯ ಮಾತಾಜಿ ವರಮಹಾಲಕ್ಷ್ಮಿ ಪೂಜಾ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಪೂಜ ಸಮಿತಿಯ ಅಧ್ಯಕ್ಷ ಸೌಮ್ಯ ವೇಣುಗೋಪಾಲ್ ಉಪಸ್ಥಿತರಿದ್ದರು.
ವೇದ, ಜಯಂತಿ, ಪೂಜಾ, ಪ್ರಾರ್ಥಿಸಿ, ಪೂಜಾ ಸ್ವಾಗತಿಸಿ,ಕುಸುಮ ಶೆಟ್ಟಿ ವಂದಿಸಿದರು, ಪ್ರೇಮ ನಾಗೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು














