Saturday, March 7, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25,000 /- ದೇಣಿಗೆ -ಕಹಳೆ ನ್ಯೂಸ್

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆಗಸ್ಟ್ 08 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು. ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ ವಿನಾಯಕರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ರಾಜೇಶ್ ಪಿ, ಕಾರ್ಯದರ್ಶಿ ಶ್ರೀ ಗಣೇಶ್ ಬಜಿಲ, ಉಪಾಧ್ಯಕ್ಷರಾದ ಶ್ರೀ ಅರುಣ್ ನಾಯ್ಕ್, ಸಂಯೋಜಕರಾದ ಶ್ರೀ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ಶ್ರೀ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಚೇತನ್ ಗುಡಿಗಾರ್, ಉಪಾಧ್ಯಕ್ಷರಾದ ಶ್ರೀ ಗೋವಿಂದ ಸುವರ್ಣ ಪೊಂಗರು, ಸದಸ್ಯರಾದ ಶ್ರೀ ಮಹಾಬಲ ನಾಯ್ಕ ಮತ್ತು ಶ್ರೀ ಉಮೇಶ ಆಚಾರ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು