Friday, March 13, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು.

ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ ಶೌರ್ಯ ತಂಡದ ಜವಾಬ್ದಾರಿಗಳ ಬಗ್ಗೆ ತಿಳಿಸಿದರು.
ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಕಲ್ಲಡ್ಕ ವಲಯ ಮೇಲ್ವಿಚಾರಕ ಸುಖರಾಜ್, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ ಬೋಳಂತೂರು ಒಕ್ಕೂಟ ಅಧ್ಯಕ್ಷೆ ಸೀತಾ, ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಸಂಯೋಜಕಿ ವಿದ್ಯಾ, ಶೌರ್ಯ ಸದಸ್ಯರುಗಳಾದ ಗಣೇಶ್ ನೆಟ್ಲ, ರವಿಚಂದ್ರ, ಧನಂಜಯ, ರಮೇಶ್ ಕುದ್ರೆಬೆಟ್ಟು, ಸಂತೋಷ್ ಬೊಲ್ಪೊಡಿ, ಚಿನ್ನಾ ಕಲ್ಲಡ್ಕ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾ ಸ್ವಾಗತಿಸಿ, ಗಣೇಶ್ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು