Thursday, March 12, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘ಸಿಲಿಂಡರ್’ ಸ್ಪೋಟಕ್ಕೆ 6 ಮನೆಗಳು ಛಿದ್ರ ಛಿದ್ರ, 12 ಮಂದಿಗೆ ಗಂಭೀರ ಗಾಯ, -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮನೆಗಳು ಛಿದ್ರ ಛಿದ್ರವಾಗಿದ್ದು, ಓರ್ವ ಬಾಲಕ ಮೃತಪಟ್ಟು 12 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಒಂದು ಸಿಲಿಂಡರ್ ಸ್ಪೋಟಕ್ಕೆ 10 ಮನೆಗಳು ಛಿದ್ರ ಛಿದ್ರವಾಗಿದೆ ಎನ್ನಲಾಗಿದೆ .ಸಿಲಿಂಡರ್ ಸ್ಪೋಟಕ್ಕೆ ಓರ್ವ ಮಹಿಳೆಯ ಕಾಲು ಕೂಡ ಕಟ್ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಸ್ತೂರಿ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಒಂದು ಸಿಲಿಂಡರ್ ಸ್ಪೋಟಗೊಂಡು 6 ಮನೆ ಛಿಧ್ರ ಛಿದ್ರವಾಗಿದ್ದು, ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು

ದಕ್ಷಿಣ ವಿಭಾಗದ ಡಿಸಿಪಿ ಸಾರಾ ಫಾತಿಮಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.