Wednesday, March 11, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ -ಕಹಳೆ ನ್ಯೂಸ್

ಬೆಂಗಳೂರು: ಕೆ.ಆರ್ ಮಾರ್ಕೆಟ್ ಬಳಿಯ ನಗರ್ತಪೇಟೆಯ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದುರಂತದಲ್ಲಿ ಸಜೀವ ದಹನವಾದ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರಾಗಿದ್ದು, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ.

ಜಾಹೀರಾತು
ಜಾಹೀರಾತು

ಇನ್ನೂ ಘಟನಾ ಸ್ಥಳಕ್ಕೆ ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ರಾತ್ರಿ 2.30ರ ಸುಮಾರಿಗೆ ಅಗ್ನಿ ಅವಗಢ ಸಂಭವಿಸಿದ ಮಾಹಿತಿ ಬಂತು. ಅಗ್ನಿಶಾಮಕ ದಳದವರು ನಮ್ಮ ಪೊಲೀಸ್ರು ಪರಿಶೀಲನೆ ಮಾಡ್ತಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದ್ರೆ ಒಂದು ಫ್ಯಾಮಿಲಿ ಮಾತ್ರ ಬೆಂಕಿ ಕೆನ್ನಾಲಿಗೆಗೆ ಸಿಲುಕಿಕೊಂಡಿದೆ.

ಎರಡು ಮೃತದೇಹಗಳನ್ನ ಈಗಾಗಲೇ ಹೊರ ತೆಗೆಯಲಾಗಿದೆ. ಮೇಲಿನ ಫ್ಲೋರ್ ನಲ್ಲಿ ಕಂಪ್ಲೀಟ್ ಬೆಂಕಿ, ಹೊಗೆ ಆವರಿಸಿದೆ ಒಳಗಡೆ ಹೋಗೋದಕ್ಕೆ ಆಗ್ತಿಲ್ಲ, ಹೀಗಾಗಿ ಒಳಗಡೆ ಸಿಲುಕಿದವರನ್ನ ಹುಡುಕಲು ಆಗ್ತಿಲ್ಲ. ಕಾರ್ಯಾಚರಣೆ ಮುಂದುವರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ, ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಹಾಗೂ ನಮ್ಮ ರಕ್ಷಣಾ ತಂಡದವರು ಕಾರ್ಯಾಚರಣೆ ಮಾಡ್ತಿದ್ದಾರೆ. ಇನ್ನು ಮೃತದೇಹಗಳು ಇರುವ ಶಂಕೆ ಇದೆ ಎಂದು ತಿಳಿಸಿದ್ದಾರೆ.