Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ಹಿರಿಯ ವಿದ್ಯಾರ್ಥಿನಿಯೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ , ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯÁದ ಯುಕ್ತಶ್ರೀ ಪಿ ತಮ್ಮ ಅನುಭವಗಳನ್ನು ಹಂಚಿಕೊAಡರು. ಇವರು 2024- 25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 593 ಅಂಕಗಳೊAದಿಗೆ ರಾಜ್ಯಕ್ಕೆ 5 ನೇ ರಾಂಕ್ ಗಳಿಸಿದ್ದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕಲಾ ಸಂಘದ ಸಂಯೋಜಕರಾದ ಮೊನಿಷಾ ಎನ್ ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕಿ ಕು. ಸವಿತಾ ಉಪಸ್ಥಿತರಿದ್ದರು.

ಪ್ರಥಮ ಹಾಗೂ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಭಾಗಿಯಾದರು. ಉಪನ್ಯಾಸಕಿ ಮೊನಿಷಾ ಎನ್ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು