Monday, September 7, 2026
ಉಡುಪಿಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಉಳಿಸಿ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ: ಕುತ್ಯಾರು ನವೀನ್‌ ಶೆಟ್ಟಿ -ಕಹಳೆ ನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಗುರಿ ಮಾಡಿರುವ ಹಿಂದೂ ವಿರೋಧಿಗಳ ಸಂಚನ್ನು ವಿಫ‌ಲಗೊಳಿಸಿ ಹಿಂದೂಗಳ ಶ್ರದ್ಧಾ ಕೇಂದ್ರಗಳ ಮೇಲಿನ ದಾಳಿಯನ್ನು ಖಂಡಿಸಿ ಜಿಲ್ಲಾಯಾದ್ಯಂತ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆಯುವ ‘ಧರ್ಮಸ್ಥಳ ಉಳಿಸಿ’ ಅಭಿಯಾನಕ್ಕೆ ಜಿಲ್ಲಾ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್‌ ಶೆಟ್ಟಿ ಅವರು ತಿಳಿಸಿದರು.

ಜಾಹೀರಾತು

ಪಕ್ಷದ ಕಚೇರಿಯಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಮಾಲೋಚನ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಸ್‌.ಐ.ಟಿ. ತನಿಖೆ ನೆಪವನ್ನು ಮುಂದಿಟ್ಟುಕೊಂಡು ನಿರಂತರವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಕಪೋಲಕಲ್ಪಿತ ವಿಷಯಗಳೊಂದಿಗೆ ಮಾನಹಾನಿಕರ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸುತ್ತಿರುವ ವ್ಯಕ್ತಿಗಳ ಷಡ್ಯಂತ್ರದ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು. ಅವರನ್ನು ಪತ್ತೆ ಹಚ್ಚಿ ಶಿಕ್ಷೆ ವಿಧಿಸುವ ಕೆಲಸ ಆಗಬೇಕು ಎಂದು ಅವರು ಆಗ್ರಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು