Saturday, March 7, 2026
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು -ಕಹಳೆ ನ್ಯೂಸ್

ಮಂಗಳೂರು: ಗಣೇಶೋತ್ಸವಕ್ಕೆ ಶುಭಕೋರುವ ನಿಟ್ಟಿನಲ್ಲಿ ಅನುಮತಿ ಪಡೆದು ಹಾಕಿದ್ದ ಬ್ಯಾನರ್ ನ್ನು ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದೆ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ.

ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ, ಸೇವಾಂಜಲಿ ನಗರದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ನ್ನು ಅನುಮತಿ ಪಡೆದು ಕುಂಪಣಮಜಲು ಕ್ರಾಸ್ ಬಳಿ ಅಳವಡಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫರಂಗಿಪೇಟೆಯ ಹೈದರ್ ಎಂಬಾತ ಬ್ಯಾನರ್ ಹರಿದು ಹಾಕಿದ್ದ. ೩,೫೦೦ ರೂಪಾಯಿ ನಷ್ಟವುಂಟು ಮಾಡಿದ್ದಲ್ಲದೇ ಧರಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದಾನೆ. ಈ ಹಿನ್ನೆಲೆಯಲ್ಲಿ ಹೈದರ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು