Saturday, March 7, 2026
ರಾಜ್ಯಸುದ್ದಿಹೆಚ್ಚಿನ ಸುದ್ದಿ

SHOCKING : ರಾಜ್ಯದಲ್ಲೊಂದು `ಪೈಶಾಚಿಕ ಕೃತ್ಯ’ : ಅಪ್ರಾಪ್ತ ಬಾಲಕನ ಮೇಲೆ ಹುಡುಗನಿಂದಲೇ ಲೈಂಗಿಕ ದೌರ್ಜನ್ಯ.!-ಕಹಳೆ ನ್ಯೂಸ್

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, 16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ.

ಚಿತ್ತಾಪುರ ಪಟ್ಟಣದ ಶಹಾಬಾದ್ ರಸ್ತೆ ಮಾರ್ಗದಲ್ಲಿನ ಪಟ್ಟಣದಲ್ಲಿರುವ ಸ್ಥಳೀಯ ನ್ಯಾಯಾಲಯದ ಹಳೆಯ ಕಟ್ಟಡದ ಆವರಣದೊಳಗೆ ಆ.26 ರಂದು ರಾತ್ರಿ 7.30 ರಿಂದ 8 ಗಂಟೆಯ ನಡುವೆ ಲೈಂಗಿಕ ದೌರ್ಜನ್ಯ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

16 ವರ್ಷದ ಹುಡುಗನೊಬ್ಬ 14 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ದೌರ್ಜನ್ಯಕ್ಕೊಳಗಾದ ಬಾಲಕ ಮನೆಗೆ ತೆರಳಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಬಾಲಕನ ತಾಯಿಯು ನಿನ್ನೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು