Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ಸೆಪ್ಟೆಂಬರ್ 1 ರಂದು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ “ಬಿಝ್‌ಬ್ಲೂಮ್ ಫೆಸ್ಟ್ 2025“ -ಕಹಳೆ ನ್ಯೂಸ್

ಪುತ್ತೂರು :ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನ ವಾಣಿಜ್ಯ ವಿಭಾಗದ ಕಾಮರ್ಸ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ “ವ್ಯವಹಾರ “ಇದರ ಸಹಯೋಗದೊಂದಿಗೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉತ್ಸವ ಬಿಝ್‌ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವು ಸೆ. 1 ರಂದು ನಡೆಯಲಿದೆ.

ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್‌ಇ) ಪುತ್ತೂರು ಇದರ ಸಂಚಾಲಕರಾದ ಭರತ್ ಪೈ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಇದರ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಉದ್ಘಾಟಿಸಲಿದ್ದಾರೆ.

ಜಾಹೀರಾತು
ಜಾಹೀರಾತು

ಸಮಾರೋಪ ಸಮಾರಂಭದಲ್ಲಿ ನವೋದಯ ಪ್ರೌಢಶಾಲೆ ಬೆಟ್ಟಂಪಾಡಿ ಇದರ ಕಾರ್ಯದರ್ಶಿಗಳಾದ ಚಂದ್ರಹಾಸ ಮುರೂರು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನರೇಂದ್ರ ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ಸಂಚಾಲಕರಾದ ಸಂತೋಷ ಬಿ., ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತಿ ಇರಲಿದ್ದಾರೆ.

ನರೇಂದ್ರ ಪ.ಪೂ.ಕಾಲೇಜಿನಲ್ಲಿ“ ವ್ಯವಹಾರ “ ಎಂಬ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮದ ಮೂಲಕ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸಲು ಅವಕಾಶಗಳನ್ನು ನೀಡಲಾಗುತ್ತಿದೆ.ಈತರಬೇತಿಯಲ್ಲಿ ವಿವಿಧತಜ್ಞರಿಂದ ವಿಶೇಷ ಉಪನ್ಯಾಸಗಳು, ವ್ಯಾಪಾರ ಮೇಳಗಳಲ್ಲಿ ಭಾಗವಹಿಸುವ ಅವಕಾಶ, ಸೇಲ್ಸ್, ಅಕೌಂಟಿAಗ್, ಮಾರ್ಕೆಟಿಂಗ್ ಮುಂತಾದ ವ್ಯಾಪಾರ ಆವರಣಗಳ ಭೇಟಿ, ಸಾಫ್ಟ್ ಸ್ಕಿಲ್ ತರಬೇತಿ ಮತ್ತು ಇನ್ನಿತರ ಕೌಶಲ್ಯಾಧಾರಿತ ತರಬೇತಿಗಳ ಮೂಲಕ ವಾಣಿಜ್ಯಕ್ಷೇತ್ರದ ಉದ್ಯಮ ಜ್ಞಾನವನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.ಈ“ ವ್ಯವಹಾರ “ ವಿಭಾಗದ ಸಹಯೋಗದಲ್ಲಿ ಈ ಬಿಝ್‌ಬ್ಲೂಮ್ ಫೆಸ್ಟ್ 2025 ಕಾರ್ಯಕ್ರಮವನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ.

ಗುಣಾತ್ಮಕ ಮತ್ತು ಮೌಲ್ಯಾಧಾರಿತ ಶಿಕ್ಷಣ, ತತ್ವಚಿಂತನೆಯ ಮಾರ್ಗದರ್ಶನದ ಮೂಲಕ ಭವಿಷ್ಯದ ಪ್ರಯತ್ನಗಳಿಗೆ ಸಜ್ಜಾಗಲು ಯುವ ಮನಸ್ಸುಗಳನ್ನು ರೂಪಿಸುವ ಶಿಕ್ಷಣ ಸಂಸ್ಥೆ ತೆಂಕಿಲದ ನರೇಂದ್ರ ಪದವಿ ಪೂರ್ವಕಾಲೇಜು.ವಿದ್ಯಾರ್ಥಿಗಳ ನೈಜಜಗತ್ತಿನಕೌಶಲ್ಯ ಮತ್ತು ಜ್ಞಾನವನ್ನು ಸಂಯೋಜಿಸುವ ಮತ್ತು ನಾವೀನ್ಯತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿನ್ಯಾಸಗೊಳಿಸಿದ ಈ ಕಾರ್ಯಕ್ರಮದಲ್ಲಿ ವಿವಿಧಶಾಲೆಗಳ 300 ಕ್ಕೂಮ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಈ ವಿದ್ಯಾರ್ಥಿಗಳಿಗಾಗಿ ಚರ್ಚಾ ಸ್ಪರ್ಧೆ, ಪೈಂಟಿAಗ್, ಬ್ಯುಸಿನೆಸ್ ರಸಪ್ರಶ್ನೆ, ಮ್ಯಾಡ್‌ಆಡ್, ವೀಡಿಯೋ , ರೀಲ್ಸ್, ಸೈನ್ಸ್ ಮೋಡೆಲ್, ಪ್ರೊಡಕ್ಟ್ ಲಾಂಚ್, ಮಾರ್ಕೆಟಿಂಗ್, ಪೋಸ್ಟರ್ ಮೇಕಿಂಗ್, ಮೆಹೆಂದಿ ಸ್ಪರ್ಧೆ, ಥೀಮ್ ಬೇಸ್ಡ್ಡಾನ್ಸ್ ಇತ್ಯಾದಿ ಒಟ್ಟು 14 ವಿವಿಧ ಮಾದರಿಯ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.ಪ್ರತಿ ಸ್ಪರ್ಧೆಯ ವಿಜೇತರಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನವನ್ನು ನೀಡಿ ಪುರಸ್ಕರಿಸಲಾಗುತ್ತದೆ.ಅತೀ ಹೆಚ್ಚು ಅಂಕ ಪಡೆದ ಶಾಲೆಗೆ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಗುತ್ತದೆ.ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಗುತ್ತದೆ. ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.