Saturday, March 7, 2026
ಅಂಕಣಬೆಂಗಳೂರುಸಿನಿಮಾಸುದ್ದಿ

ನಟಿ ರಮ್ಯಾ ವಿರುದ್ಧ ಅಶ್ಲೀಲ ಸಂದೇಶ; ಬಂಧಿತರ ಸಂಖ್ಯೆ 12 ಕ್ಕೆ ಏರಿಕೆ-ಕಹಳೆ ನ್ಯೂಸ್

ಬೆಂಗಳೂರು: ನಟಿ ರಮ್ಯಾಗೆ ಸಾಮಾಜಿಕ ಜಾಲಾತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದ ಮತ್ತಷ್ಟು ಮಂದಿಯನ್ನ ಸಿಸಿಬಿ ಪೊಲೀಸರು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಕೊಟ್ಟಿದ್ದಾರೆ‌. ನಟಿಗೆ ಅಶ್ಲೀಲ ಸಂದೇಶ ಮಾಡಿ ಸಿಕ್ಕಿ ಬಿದ್ದವರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ.

ಬಿಜಾಪುರ, ಚಿತ್ರದುರ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಿಂದ 9 ಮಂದಿ ಆರೋಪಿಗಳನ್ನ ಬಂಧಿಸಿದ್ದ ಸಿಸಿಬಿ ಪೊಲೀಸರು ಮತ್ತೆ ಇಬ್ಬರು ಉತ್ತರ ಕರ್ನಾಟಕದ ಮೂಲದ ಯುವಕರನ್ನ ಬಂಧನ ಮಾಡಿದ್ದಾರೆ. ಬಂಧಿತ ಇಬ್ಬರು ಕೂಡ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಟಿ ರಮ್ಯಾ ದೂರಿನಲ್ಲಿ ಸುಮಾರು 40 ಕ್ಕೂ ಅಧಿಕ ಅಕೌಂಟ್‌ಗಳ ಡಿಟೈಲ್ಸ್ ಕೊಟ್ಟಿದ್ದು. 12 ಅಕೌಂಟ್‌ಗಳ ಮಾಹಿತಿ ಪಡೆದು 12 ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಮತ್ತೆ 10 ಕ್ಕೂ ಹೆಚ್ಚು ಮಂದಿಯ ಇನ್ಸ್ಟಾಗ್ರಾಂ ಖಾತೆಯ ಮಾಹಿತಿ ಪಡೆದಿದ್ದು, ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು

ಕೆಲವರು ಕೋರ್ಟ್ ಮೊರೆ ಹೋಗಿದ್ದು, ಉಳಿದ ಕೆಲವರು ಅಕೌಂಟ್‌ನಲ್ಲಿ ಹಾಕಿದ್ದ ಕಾಮೆಂಟ್‌ಗಳನ್ನ‌ ಡಿಲೀಟ್ ಮಾಡಿಕೊಂಡು ತಲೆಮರಿಸಿಕೊಂಡಿದ್ದಾರೆ. ಹಾಗಾಗಿ, ಆರೋಪಿತರ ಟವರ್ ಲೊಕೇಷನ್‌ಗಳನ್ನ ಪತ್ತೆ ಮಾಡಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.