ಧರ್ಮಸ್ಥಳ ಕೇಸ್ : ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಎಂ.ಡಿ ಗೆ ಸೂಚನೆ -ಕಹಳೆ ನ್ಯೂಸ್

ಮಂಗಳೂರು: ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಗೆ ಬೆಳ್ತಂಗಡಿ ಪೊಲೀಸರು ಸೂಚನೆ ನೀಡಿದ್ದಾರೆ.
ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು.














