Saturday, March 7, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಬಿಡುಗಡೆ -ಕಹಳೆ ನ್ಯೂಸ್

ಬಂಟ್ವಾಳ : ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ ಮಂಗಳೂರು ದಸರಾ ಪ್ರಯುಕ್ತ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 21 ರಂದು ನಡೆಯುವ ಮಂಗಳೂರು ದಸರಾ ಕ್ರೀಡೋತ್ಸವದ ಆಮಂತ್ರಣ ಪತ್ರವನ್ನು ಯುವವಾಹಿನಿ ಬಂಟ್ವಾಳ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಅಥ್ಲೆಟಿಕ್, ವಾಲಿಬಾಲ್, ತ್ರೋಬಾಲ್, ಸ್ಪರ್ಧೆಗಳು ಪುರುಷರು ಹಾಗೂ ಮಹಿಳಾ ವಿಭಾಗ ಸೇರಿದಂತೆ ವಿವಿಧ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ, ಎಲ್ಲಾ ಆಸಕ್ತ ಕ್ರೀಡಾಪಟುಗಳು ಹಾಗೂ ಸಂಘ ಸಂಸ್ಥೆಗಳಿಗೆ ಮುಕ್ತ ಅವಕಾಶ ಇದೆ ಎಂದು ಮಂಗಳೂರು ತಾಲುಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ ಸುವರ್ಣ ಹಾಗೂ ಕ್ರೀಡೋತ್ಸವದ ಪಥಸಂಚಲನದ ಸಂಚಾಲಕ ಹರೀಶ್ ಪಚ್ಚನಾಡಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿ ಮಧುಸೂದನ್ ಮದ್ವ, ಉಪಾಧ್ಯಕ್ಷರಾದ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ, ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಸಲಹೆಗಾರರ ರಾಮಚಂದ್ರ ಸುವರ್ಣ ತುಂಬೆ, ಯುವವಾಹಿನಿ ಮಾಜಿ ಅಧ್ಯಕ್ಷ ಟಿ ಶಂಕರ ಸುವರ್ಣ, ಪ್ರೇಮನಾಥ್ ಕೆ ಮತ್ತಿತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು