Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ – ಕಹಳೆ ನ್ಯೂಸ್

 ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ವಿಜ್ಞಾನ ಸಂಘದ ಉದ್ಘಾಟನೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರವನ್ನು ಡಾ| ಸುದೀಪ್ ಡಿ. ಘಾಟೆ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೀನಿಯರ್ ಡೇಟಾ ಸೈಂಟಿಸ್ಟ್, ಹೆಲ್ತ್ ಕೇರ್ ಅಂಡ್ ಲೈಫ್ ಸೈನ್ಸ್ , ಇ.ಪಿ.ಎ.ಎಂ ಸಿಸ್ಟಮ್ಸ್ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ವಹಿಸಿಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸAಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಡಾ| ಸುದೀಪ್ ಡಿ. ಘಾಟೆ ಅವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಎರಡು ಅವಧಿಗಳಲ್ಲಿ ವೃತ್ತಿ ಮಾರ್ಗದರ್ಶನ ಕುರಿತಾದ ಕಾರ್ಯಾಗಾರ ನಡೆಸಿಕೊಟ್ಟರು. ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸದಲ್ಲಿ ಇರುವ ಹತ್ತು-ಹಲವು ಅವಕಾಶಗಳ ಕುರಿತಾದ ಸವಿವರವಾದ ಮಾಹಿತಿಯನ್ನು ನೀಡಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಮಾಧವಿ ಪಟೇಲ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.

ಜಾಹೀರಾತು
ಜಾಹೀರಾತು