Friday, April 24, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್

ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಮುಳಿಯ ತಿರುಮಲೇಶ್ವರ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷರುಗಳದ ಕೈಯೂರ್ ನಾರಾಯಣ ಭಟ್, ಬಾಲಕೃಷ್ಣ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಸುರೇಶ ಗೌಡ, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಅಣ್ಣಪ್ಪ ಶಾಸ್ತರ, ಶ್ರೀಮತಿ ರೇಣುಕಾ ಕಣಿಯೂರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ವಲಯದ ಮೇಲ್ವಿಚಾರಕರಾದ ಜಗದೀಶ್ ಪೂಜಾರಿ ಮಾಡಿದರು. ವಲಯದ ಸೇವಾಪ್ರತಿನಿಧಿ ಮತ್ತು ವಿಪತ್ತು ಸದಸ್ಯರು ಸಹಕರಿಸಿದರು. ಕಾರ್ಯಕ್ರಮದ ಧನ್ಯವಾದವನ್ನು ಉಪನ್ಯಾಸಕಿ ಶ್ರೀಮತಿ ಸವಿತ ಮಾಡಿದರು.