Recent Posts

Saturday, April 25, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವತಿಯಿಂದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು ನರಿಮೊಗರುನಲ್ಲಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ವತಿಯಿಂದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳು ನರಿಮೊಗರು ಇಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದೀಪ್ತಿ 10ನೇ ತರಗತಿ ಹಾಗೂ ಜ್ಞಾನವಿ.ಎನ್ 9ನೇ ತರಗತಿ ರಿದಮಿಕ್ ವಿಭಾಗದಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ಆರ್ಟಿಸ್ಟಿಕ್ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ರಕ್ಷ ಎಂ.ಜೆ ಮತ್ತು ಇಂಚರ ತೃತೀಯ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ ವಿಭಾಗದಲ್ಲಿ ರಚನ್ ಹತ್ತನೇ ತರಗತಿ ಹಾಗೂ ದಿಗಂತ್ 9ನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಸಂಸ್ಥೆಯ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ.ವಿ ಇವರು ತರಬೇತಿ ನೀಡಿರುತ್ತಾರೆ. ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಪರವಾಗಿ ಅಭಿನಂದನೆಗಳು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು