Tuesday, March 10, 2026
ಅಂಕಣಕ್ರೈಮ್ಬೆಂಗಳೂರುಸುದ್ದಿ

ʻಕೈʼ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣ ; ಜೈಲಾ, ಬೇಲಾ; ಇಂದು ನಿರ್ಧಾರ?-ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕ ಕೆಸಿ ವಿರೇಂದ್ರ ಪಪ್ಪಿಗೆ  ಜೈಲಾ, ಬೇಲಾ ಅನ್ನೋದು ಇಂದು ನಿರ್ಧಾರವಾಗಲಿದೆ.

ಮೊದಲ ಬಾರಿಗೆ 5 ದಿನ 2ನೇ ಬಾರಿಗೆ 6 ದಿನ ಇಡಿ ಕಸ್ಟಡಿಗೆ ಪಡೆದಿತ್ತು. ಇಂದು ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಪಪ್ಪಿ ಬ್ಯಾಂಕ್‌ ಖಾತೆಯಿಂದ 55 ಕೋಟಿ ನಗದು ಫ್ರೀಜ್‌ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು

ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್‌ ಮಾಡಲಾಗಿದೆ. ಹೀಗಾಗಿ ಹಣದ ಮೂಲ ಪತ್ತೆಗಾಗಿ ಮತ್ತೆ ಕಸ್ಟಡಿಗೆ ಕೇಳಲು ಇಡಿ ಪ್ಲ್ಯಾನ್‌ ಮಾಡಿಕೊಂಡಿದೆ. ಒಂದು ವೇಳೆ ಕಸ್ಟಡಿಗೆ ಕೇಳದಿದ್ರೆ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಕಳಿಸಲಿದೆ.

ಏನಿದು ಪ್ರಕರಣ?
ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪ ಪಪ್ಪಿ ವಿರುದ್ಧ ಕೇಳಿಬಂದಿತ್ತು. ಈ ಕುರಿತು ಗೋವಾದಲ್ಲಿ 2 ಪ್ರಕರಣ ದಾಖಲಾಗಿತ್ತು. ಇದನ್ನಾಧರಿಸಿ ಇಡಿ ದಾಳಿ  ನಡೆಸಿತ್ತು.