ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ಕಹಳೆ ನ್ಯೂಸ್

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು.
ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.














