Friday, April 24, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಸೆ . 05 ರಂದು ಆಜಾದ್ ಭವನದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು, ನಂತರ ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್ ಘಟಕದ ಪ್ರಾಂತ ಸಂಯೋಜಕರಾದ ಶ್ರೀ ಗಣಪತಿ ಹೆಗ್ಡೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದರು.

ಪುತ್ತೂರು ನರೇಂದ್ರ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಹಾಗೂ ಯಕ್ಷಗಾನ ಕಲಾವಿದೆ ಶ್ರೀಮತಿ ಮಧುರಾ ಗಣರಾಜ್ ಭಟ್ ಇವರು ಸಾಂಸ್ಕೃತಿಕ ಸಂಘದ ಉದ್ಘಾಟನೆಯನ್ನು ನೆರವೇರಿಸಿ, ಭವಿಷ್ಯದ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಂಸ್ಕೃತಿಕ ಚಟುವಟಿಕೆ, ನಾಯಕತ್ವ, ವಾಕ್ಚಾತುರ್ಯದ ಮೂಲಕ ತಯಾರಿ
ನಡೆಸಬೇಕು ಎನ್ನುತ್ತಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಓಣಂ ಹಬ್ಬದ ಪ್ರಯುಕ್ತ ಪೂಕಳಂ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ಕಾ ಯರಕಟ್ಟೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭವಿಷ್ ಘಟಕದ ನಿರ್ದೇಶಕಿ ಶ್ರೀಮತಿ ಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ದಿವ್ಯಲಕ್ಷ್ಮೀ ಸ್ವಾಗತಿಸಿ, ಅಕ್ಷಯ ನರಸಿಂಹ ವಂದಿಸಿ, ಕು.ಧನುಶ್ರೀ ಕಾರ್ಯಕ್ರಮ ನಿರ್ವಹಿಸಿದರು.