
ಅನಿಲ್ ಪರಪ್ಪ ಕಾನಟ್ಟಿ(32) ಮೃತ ವ್ಯಕ್ತಿ. ಕುಡಿದ ಮತ್ತಲ್ಲಿ ನಿತ್ಯ ಮನೆಯಲ್ಲಿ ಜಗಳವಾಡುತ್ತಿದ್ದ. ಹೀಗಾಗಿ ಸಹೋದರ ಯೋಧ ಬಸವರಾಜ ಕಾನಟ್ಟಿ, ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮೂವರು ಸೇರಿಕೊಂಡು ಕೊಲೆ ಮಾಡಿದ್ದಾರೆ ಎನ್ನಲಾಗಿದೆ
ಸೆ.5ಕ್ಕೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಹೋದರ ಬಸವರಾಜ ಕಾನಟ್ಟಿ ಯೋಧನಾಗಿದ್ದು, ರಜೆ ಮೇಲೆ ಊರಿಗೆ ಬಂದಿದ್ದ. ಈ ವೇಳೆ ಕುಡುಕ ಸಹೋದರನ ಗಲಾಟೆ ತಾಳಲಾರದೆ ಈ ಕೃತ್ಯ ಎಸಗಿದ್ದಾರೆ. ಸಹೋದರ, ತಂದೆ ಹಾಗೂ ತಾಯಿ ಮೂವರು ಸೇರಿಕೊಂಡು ಡೀಸೆಲ್ ಸುರಿದು ಸುಟ್ಟು ಹಾಕಿ, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.











