Saturday, March 7, 2026
ಕುಂದಾಪುರಜಿಲ್ಲೆಸುದ್ದಿ

ಮಾನವಿಯತೆಯ ಸದಾಶಯವನ್ನು ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ: ಸಂಸದ ಕೋಟ – ಕಹಳೆ ನ್ಯೂಸ್

ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು.
ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರು ಕೋಟ ಶ್ರೀನಿವಾಸ್ ಪೂಜಾರಿಯವರು ಇಂದು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ಇವರ ವತಿಯಿಂದ ಆಯೋಜಿಸಲಾದ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ರಾಣಿ ಅಬ್ಬಕ್ಕ ಜಯಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ ಎಂದು ನುಡಿದ ಅವರು ರಾಣಿ ಅಬ್ಬಕ್ಕರ ಹೋರಾಟದ ರೂಪುರೇಷೆಗಳ ಬಗ್ಗೆ ಸಮಗ್ರ ವಿಚಾರಧಾರೆಗಳನ್ನು ಹಂಚಿಕೊಂಡರು.

ನಾರಾಯಣ ಗುರುಗಳು ಕೇವಲ ಒಂದು ಸಮಾಜಕ್ಕೆ ಮಾತ್ರವಲ್ಲ, ಇಡೀ ಸಮುದಾಯಕ್ಕೆ ಗುರುಗಳು. ಸಂವಿಧಾನ ಹಾಗೂ ಸರಕಾರ ನೀಡಿರುವ ಅವಕಾಶಗಳನ್ನು ಬಳಸಿಕೊಂಡು, ಸಮಾಜದ ಎಲ್ಲರೂ ವೈಯಕ್ತಿಕ ಕೊಡುಗೆ ನೀಡಬೇಕು ಎಂದು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಮಂಡಲ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್ ವಹಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ನಾರಾಯಣ ಗುರುಗಳ ಹಾಗೂ ರಾಣಿ ಅಬ್ಬಕ್ಕರ ಅವರ ಕಾರ್ಯಕ್ರಮಕ್ಕೆ ಶುಭನುಡಿಗಳ ನಾಡಿದರು.

ಜಾಹೀರಾತು
ಜಾಹೀರಾತು

ಸದ್ರಿ ಕಾರ್ಯಕ್ರಮದ ವೇದಿಕೆಯಲ್ಲಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ಸುಧೀರ್. ಕೆ.ಎಸ್. ಜಿಲ್ಲಾ ಓ.ಬಿ.ಸಿ. ಪ್ರಧಾನ ಕಾರ್ಯದರ್ಶಿ ರವೀಂದ್ರ ತಿಂಗಳಾಯ,ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕುಂದಾಪುರ ಮಂಡಲ ಓಬಿಸಿ ಮೋರ್ಚ ಪ್ರಭಾರಿ ಚಂದ್ರಜೋಗಿ, ಜಿಲ್ಲಾ ಓಬಿಸಿ ಕಾರ್ಯದರ್ಶಿ ಸಂತೋಷ್ ಪೂಜಾರಿ ತೆಕ್ಕಟ್ಟೆ, ಉಪಸ್ಥಿತರಿದ್ದು ಕಾರ್ಯಕ್ರಮವನ್ನ ಕುಂದಾಪುರ ಮಂಡಲ ಓಬಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ ನಿರೂಪಿಸಿ ವಂದಿಸಿದರು.

ಸದ್ರಿ ಈ ಸಂದರ್ಭದಲ್ಲಿ ಕುಂದಾಪುರ ಓ ಬಿ ಸಿ ಮೋರ್ಚದ ಸರ್ವ ಪದಾಧಿಕಾರಿಗಳು ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ವಿವಿಧ ಜವಾಬ್ದಾರಿಯ ಪಕ್ಷದ ಮುಖಂಡರು. ಕಾರ್ಯಕರ್ತರು ಉಪಸ್ಥಿತರಿದ್ದರು