Recent Posts

Sunday, April 26, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಮಾತಾಡಿ ಯೋಜನೆಯ ಸೌಲಭ್ಯಗಳ ಮಾಹಿತಿ ನೀಡಿದರು. ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇಣುಗೋಪಾಲ್ ಸರ್ ಶುಭ ಹಾರೈಸಿದರು. ವೇದಿಕಿಯಲ್ಲಿ ವಿಟ್ಲ ವಲಯದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ, ವಿಪತ್ತು ಘಟಕದ ಅಧ್ಯಕ್ಷರಾದ ಚಂದ್ರಹಾಸ, ಸಭಭವನದ ಸದಸ್ಯರಾದ ಸಂಜೀವ ಪೂಜಾರಿ, ವಲಯದ ಮೇಲ್ವಿಚಾರಕರಾದ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಬಾಲಕೃಷ್ಣ ಶೆಟ್ಟಿ ವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಸ್ವಾಗತವನ್ನು ಸುಂದರ ಪೂಜಾರಿ ಕೆಡಿಗೆದಡಿ ಮಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಹರೀಶ್ ಪೂಜಾರಿ ನಡೆಸಿ, ಧನ್ಯವಾದವನ್ನು ಸೌಮ್ಯ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಯಶೋಧ ಮತ್ತು ಸುವಿದ ಸೇವಾದಾರರು ಶಿಲ್ಪಾ ಕಾರ್ಯಕ್ರಮಕ್ಕೆ ಸಹಕಿಸಿದರು.