Thursday, March 12, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬಸ್‌ ಚಲಾಯಿಸುತ್ತಿರುವಾಗಲೇ ಹೃದಯಾಘಾತ – ಜನರ ಜೀವವುಳಿಸಿ ಸಾವನ್ನಪ್ಪಿದ ಚಾಲಕ -ಕಹಳೆ ನ್ಯೂಸ್

ನೆಲಮಂಗಲ: KSRTC ಬಸ್ ಡ್ರೈವರ್ ಗೆ ಎದೆನೋವು (chest pain ) ಕಾಣಿಸಿಕೊಂಡ ಹಿನ್ನೆಲೆ ಬಸ್ ನಿಲ್ಲಿಸಿ ಚಾಲಕನೊಬ್ಬ ದೊಡ್ಡ ಅನಾಹುತ ತಪ್ಪಿಸಿದ್ದಾನೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಚಾಲಕರೊಬ್ಬರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ರೆ, ದುರಾದೃಷ್ಟವಷಾತ್ ಚಾಲಕ ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ್ (50) ಮೃತಪಟ್ಟಿದ್ದಾರೆ. ರಾಜೀವ್ ಬೆಂಗಳೂರಿಂದ ಹರಿಹರಕ್ಕೆ ಹೋಗುತ್ತಿದ್ದ ಕೆಎಸ್‌ಆರ್​​ಟಿಸಿ ರಾಜಹಂಸ ಬಸ್ ಚಲಾಯಿಸುತ್ತಿದ್ದರು.ನೆಲಮಂಗಲದ ಜಾಸ್ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಸಮಯಪ್ರಜ್ಞೆ ಮೆರೆದ ಅವರು ತಕ್ಷಣವೇ ಬಸ್ಸನ್ನು ಹೆದ್ದಾರಿಯಲ್ಲಿ ಒಂದು ಬದಿಯಲ್ಲಿ ನಿಲ್ಲಿಸಿ ಪ್ರಯಾಣಿಕರ ಜೀವ ಉಳಿಸಿದ್ದಾರೆ

ಜಾಹೀರಾತು
ಜಾಹೀರಾತು

ರಾಜೀವ್ ಜೀವ ಉಳಿಸಲು ಕೂಡಲೇ ಆಯಂಬುಲೆನ್ಸ್​ಗೆ ಕರೆ ಮಾಡಲಾಗಿತ್ತು. ಆದ್ರೆ ಅದು ಸ್ಥಳಕ್ಕೆ ಬರುವ ವೇಳೆಗೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ರಾಜೀವ್ ಬಿರಾದಾರ್ ಅಸುನೀಗಿದ್ದಾರೆ